ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 6 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 23 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಅಕ್ಟೋಬರ್ 2026
ಮಂಗಳವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Conception by St Elizabeth of the Honorable Glorious Prophet, Forerunner and Baptizer of the Lord John
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
8ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. 9ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, 11ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. 12ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
ಪತ್ರಿಕೆ (ಮುಂದೂತ)
22ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. 23ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. 24ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. 25ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ. 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ. 27“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ. 28ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. 29ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ. 30ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ. 31ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.
ಸುವಾರ್ತೆ
23ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು; 24ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು; 25ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ತಥೀಯನ ಮಗನು; ಮತ್ತಥೀಯನು ಆಮೋಸನ ಮಗನು; ಆಮೋಸನು ನಹೂಮನ ಮಗನು; ನಹೂಮನು ಎಸ್ಲಿಯ ಮಗನು; ಎಸ್ಲಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು; 26ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು; 27ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು; 28ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು; 29ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು; 30ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಕೀಮನ ಮಗನು; 31ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು; 32ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು; 33ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು; 34ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು; 35ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು; 36ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು; 37ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು; 38ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು. 4:1ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
ಸುವಾರ್ತೆ (ಮುಂದೂತ)
5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್. 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು. 7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. 8ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು. 9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. 10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ, 11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. 12ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. 13ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. 16ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. 18ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. 19ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. 20ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. 21ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. 22ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. 23ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು. 24ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. 25“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 6 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು