Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 7 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಅಕ್ಟೋಬರ್ 2026

ಬುಧವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಬುಧವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಜಪಮಾಲೆಯ ಮಾತೆ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಗಲಾ 2:1–2, 7–14

1ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು. 2ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. 7ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. 8ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. 9ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. 10ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು. 11ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. 12ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. 13ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. 14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”

ಪ್ರತಿವಚನ ಕೀರ್ತನೆ

ಕೀರ್ತ 117:1–2

1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

ಸುವಾರ್ತೆ

ಲೂಕ 11:1–4

1ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. 2ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. 3ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು