ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 8 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಅಕ್ಟೋಬರ್ 2026
ಗುರುವಾರ · ಸಾಮಾನ್ಯ ಕಾಲದ 27ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 27ನೇ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ? 2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ? 3ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ? 4ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? 5ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
ಪ್ರತಿವಚನ ಕೀರ್ತನೆ
69ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ. 70ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, 71ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. 72ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ. 74ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.
ಸುವಾರ್ತೆ
5ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. 6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, 7ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ 8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ. 9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. 11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? 12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? 13ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು