ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 10 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ಅಕ್ಟೋಬರ್ 2026
ಶನಿವಾರ · ಸಾಮಾನ್ಯ ಕಾಲದ 27ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 27ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
22ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. 23ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. 24ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. 25ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. 26ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. 27ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಪ್ರತಿವಚನ ಕೀರ್ತನೆ
2ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 5ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು, 6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
ಸುವಾರ್ತೆ
27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು