Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 10 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 27 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಅಕ್ಟೋಬರ್ 2026

ಶನಿವಾರ · ಪಂಚಾಶತ್ತಮದ ನಂತರದ 19ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Martyr Callistratus and 49 Martyrs in his company († 304)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ (ಶುಕ್ರವಾರಕ್ಕೆ)

ಫಿಲಿಪ್ಪಿ 1:27–2:4

27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು. 28ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ. 29ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ. 30ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು. 2:1ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ, 2ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. 3ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. 4ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.

ಪತ್ರಿಕೆ

1 ಕೊರಿ 15:58–16:3

58ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ. 16:1ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ. 2ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ. 3ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

ಸುವಾರ್ತೆ (ಶುಕ್ರವಾರಕ್ಕೆ)

ಲೂಕ 4:22–30

22ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು. 23ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ. 24ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 25ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ; 26ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು. 27ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು. 28ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, 29ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು. 30ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.

ಸುವಾರ್ತೆ

ಲೂಕ 4:31–36

31ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು, 32ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 33ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. 35ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. 36ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 10 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು