Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 12 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಅಕ್ಟೋಬರ್ 2026

ಸೋಮವಾರ · ಸಾಮಾನ್ಯ ಕಾಲದ 28ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 28ನೇ ವಾರದ ಸೋಮವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಗಲಾ 4:22–24, 26–27, 31–5:1

22ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. 23ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. 24ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ. 27“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ. 31ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ. 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

ಪ್ರತಿವಚನ ಕೀರ್ತನೆ

ಕೀರ್ತ 113:1–7

1ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ. 4ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, 6ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

ಸುವಾರ್ತೆ

ಲೂಕ 11:29–32

29ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. 30ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. 31ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು