ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 12 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 29 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಅಕ್ಟೋಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 20ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Kyriakos the Hermit of Palestine († 556)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. 13ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. 14ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. 15ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. 16ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
ಪತ್ರಿಕೆ (ಏಕಾಂತವಾಸಿ ಸಂತ ಕಿರಿಯಾಕೋಸ್)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಸುವಾರ್ತೆ
37ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು. 38ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. 39ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು. 40ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. 41ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು. 42ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು. 43ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. 44ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 12 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು