ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 13 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಅಕ್ಟೋಬರ್ 2026
ಮಂಗಳವಾರ · ಸಾಮಾನ್ಯ ಕಾಲದ 28ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 28ನೇ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. 2ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ. 3ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ. 4ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ. 5ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. 6ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
ಪ್ರತಿವಚನ ಕೀರ್ತನೆ
41ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ. 43ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ. 44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು. 45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು. 47ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ. 48ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.
ಸುವಾರ್ತೆ
37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. 38ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. 41ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು