ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 13 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಅಕ್ಟೋಬರ್ 2026
ಮಂಗಳವಾರ · ಪಂಚಾಶತ್ತಮದ ನಂತರದ 20ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Hieromartyr Gregory, Bishop and Enlightener of Great Armenia († c. 335)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
16ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. 17ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. 18ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ. 19ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. 20ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. 22ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. 23ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ.
ಪತ್ರಿಕೆ (ಬುಧವಾರಕ್ಕೆ)
24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. 25ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. 26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. 27ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. 28ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ. 29ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
ಸುವಾರ್ತೆ
12ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. 13ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು. 14ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು. 15ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು. 16ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
ಸುವಾರ್ತೆ (ಬುಧವಾರಕ್ಕೆ)
33ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು, 34ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ? 35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು. 36ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ. 37ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. 38ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು. 39ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 13 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು