ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 14 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಅಕ್ಟೋಬರ್ 2026
ಬುಧವಾರ · ಸಾಮಾನ್ಯ ಕಾಲದ 28ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 28ನೇ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಕ್ಯಾಲಿಸ್ಟಸ್ I, ಪೋಪ್ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ. 19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, 20ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, 21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. 22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
ಪ್ರತಿವಚನ ಕೀರ್ತನೆ
1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಸುವಾರ್ತೆ
42“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು. 43“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. 44ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. 45ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು, 46ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
ಇಂದಿನ ಸಂತರು
- ಸಂತ ಕ್ಯಾಲಿಸ್ಟಸ್ I, ಪೋಪ್ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು