Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 15 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಅಕ್ಟೋಬರ್ 2026

ಗುರುವಾರ · ಸಾಮಾನ್ಯ ಕಾಲದ 28ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 28ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಯೇಸುವಿನ ಸಂತ ತೆರೇಸಾ, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 1:1–10

1ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ, 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. 3ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು. 5ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. 6ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. 7ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. 8ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. 9ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. 10ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.

ಪ್ರತಿವಚನ ಕೀರ್ತನೆ

ಕೀರ್ತ 98:1–6

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. 5ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. 6ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.

ಸುವಾರ್ತೆ

ಲೂಕ 11:47–54

47ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ. 48ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. 49ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ 50ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. 52ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. 53ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ, 54ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು