ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 15 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 2 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಅಕ್ಟೋಬರ್ 2026
ಗುರುವಾರ · ಪಂಚಾಶತ್ತಮದ ನಂತರದ 20ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Hieromartyr Cyprian and Virginmartyr Justina of Nicomedia († 304)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು. 2ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ. 3ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ. 4ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. 5ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು, 6ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ. 7ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. 8ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.
ಪತ್ರಿಕೆ (ಸಂತ ಸಿಪ್ರಿಯನ್)
12ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 14ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು. 15ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. 16ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 17ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಸುವಾರ್ತೆ
12ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು. 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. 14ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, 16ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ. 17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 15 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು