Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 16 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ಅಕ್ಟೋಬರ್ 2026

ಶುಕ್ರವಾರ · ಸಾಮಾನ್ಯ ಕಾಲದ 28ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 28ನೇ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಹೆಡ್ವಿಗ್, ಸನ್ಯಾಸಿನಿ · ಐಚ್ಛಿಕ ಸ್ಮರಣೆ

ಸಂತ ಮಾರ್ಗರೆಟ್ ಮೇರಿ ಅಲಕೋಕ್, ಕನ್ಯೆ · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 1:11–14

11ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. 12ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. 13ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. 14ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

ಪ್ರತಿವಚನ ಕೀರ್ತನೆ

ಕೀರ್ತ 33:1–2, 4–5, 12–13

1ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. 2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 4ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 12ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 13ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;

ಸುವಾರ್ತೆ

ಲೂಕ 12:1–7

1ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ. 2ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು. 3ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. 4“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. 5ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. 6ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. 7ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು