Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 17 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಅಕ್ಟೋಬರ್ 2026

ಶನಿವಾರ · ಸಾಮಾನ್ಯ ಕಾಲದ 28ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 28ನೇ ವಾರದ ಶನಿವಾರ

ಸ್ಮರಣೆ · ಆರಾಧನಾ ಬಣ್ಣ: ಕೆಂಪು

ಅಂತಿಯೋಕ್ಯದ ಸಂತ ಇಗ್ನೇಷಿಯಸ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 1:15–23

15ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ, 16ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. 17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. 18ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, 19ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. 20ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ 21ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. 22ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. 23ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

ಪ್ರತಿವಚನ ಕೀರ್ತನೆ

ಕೀರ್ತ 8:1–6

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. 2ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. 3ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, 4ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

ಸುವಾರ್ತೆ

ಲೂಕ 12:8–12

8“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. 9ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. 10ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ. 11ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ. 12ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು