ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 17 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಅಕ್ಟೋಬರ್ 2026
ಶನಿವಾರ · ಪಂಚಾಶತ್ತಮದ ನಂತರದ 20ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Hieromartyr Hierotheos, Bishop of Athens (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
8ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು. 9ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು. 10ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
ಸುವಾರ್ತೆ
17ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು. 18ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು. 19ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು. 20ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು. 21ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು. 22ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು? 23ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ? 24ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು. 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. 26ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 17 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು