Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 19 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಅಕ್ಟೋಬರ್ 2026

ಸೋಮವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶಿಲುಬೆಯ ಸಂತ ಪಾಲ್, ಧರ್ಮಗುರು · ಐಚ್ಛಿಕ ಸ್ಮರಣೆ

ಸಂತರಾದ ಜಾನ್ ಡಿ ಬ್ರೆಬೊಫ್ ಮತ್ತು ಐಸಾಕ್ ಜೋಗ್ಸ್, ಧರ್ಮಗುರುಗಳು, ಮತ್ತು ಸಂಗಡಿಗರು, ಹುತಾತ್ಮರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 2:1–10

1ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ. 2ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. 3ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. 4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, 5ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. 6ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು 7ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. 8ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. 9ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. 10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಪ್ರತಿವಚನ ಕೀರ್ತನೆ

ಕೀರ್ತ 100:1–5

1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ಸುವಾರ್ತೆ

ಲೂಕ 12:13–21

13ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು, 14ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ, 15ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು. 16ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. 17ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ, 18‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, 19ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. 20“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. 21ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು