Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 20 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಅಕ್ಟೋಬರ್ 2026

ಮಂಗಳವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 2:12–22

12ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. 13ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. 14ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. 15ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ. 16ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. 17ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. 18ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. 21ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.

ಪ್ರತಿವಚನ ಕೀರ್ತನೆ

ಕೀರ್ತ 85:8–13

8ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

ಸುವಾರ್ತೆ

ಲೂಕ 12:35–38

35“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. 37ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು