Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 20 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 7 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಅಕ್ಟೋಬರ್ 2026

ಮಂಗಳವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Martyrs Sergius and Baccus in Syria († 290-303)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಕೊಲೊ 1:1–2, 7–11

1ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು, 2ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ. 7ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ. 8ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ. 9ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ, 10ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, 11ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,

ಸುವಾರ್ತೆ

ಲೂಕ 6:37–45

37“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು. 38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು. 39ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. 40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. 41“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? 42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು. 43ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ. 45ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 20 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು