ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 21 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಅಕ್ಟೋಬರ್ 2026
ಬುಧವಾರ · ಸಾಮಾನ್ಯ ಕಾಲದ 29ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 29ನೇ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, 3ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. 4ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. 5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. 6ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. 7ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ 9ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. 10ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. 12ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
ಪ್ರತಿವಚನ ಕೀರ್ತನೆ
2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಸುವಾರ್ತೆ
39ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. 40ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು. 41ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, 42ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 45ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, 46ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. 47ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. 48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು