ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 21 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 8 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಅಕ್ಟೋಬರ್ 2026
ಬುಧವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Venerable Pelagia the Penitent († 457)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
18ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. 19ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, 20ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು. 21ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. 22ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. 23ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
ಸುವಾರ್ತೆ
46“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? 47ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. 48ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು. 49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.” 7:1ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 21 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು