Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 22 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಅಕ್ಟೋಬರ್ 2026

ಗುರುವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ವಾರದ ಗುರುವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಜಾನ್ ಪಾಲ್ II, ಪೋಪ್ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 3:14–21

14ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, 16ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, 17ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 18ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

ಪ್ರತಿವಚನ ಕೀರ್ತನೆ

ಕೀರ್ತ 33:1–2, 4–5, 11–12, 18–19

1ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. 2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 4ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 11ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 12ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.

ಸುವಾರ್ತೆ

ಲೂಕ 12:49–53

49“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ. 50ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. 51ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. 52ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. 53ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು