Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 22 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 9 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಅಕ್ಟೋಬರ್ 2026

ಗುರುವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Holy Apostle James the son of Alphæus (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಕೊಲೊ 1:24–29

24ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. 25ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. 26ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. 27ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. 28ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. 29ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

ಸುವಾರ್ತೆ

ಲೂಕ 7:17–30

17ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. 18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು, 19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. 20ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. 21ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. 22ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. 23ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು. 24ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 25ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. 26ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. 27‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. 28ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ. 29ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. 30ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 22 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು