ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 23 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಅಕ್ಟೋಬರ್ 2026
ಶುಕ್ರವಾರ · ಸಾಮಾನ್ಯ ಕಾಲದ 29ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 29ನೇ ವಾರದ ಶುಕ್ರವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಕಾಪಿಸ್ಟ್ರಾನೊದ ಸಂತ ಜಾನ್, ಧರ್ಮಗುರು · ಐಚ್ಛಿಕ ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
1ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, 5ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ
ಸುವಾರ್ತೆ
54ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. 55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. 56ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? 57“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? 58ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. 59ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.
ಇಂದಿನ ಸಂತರು
- ಕಾಪಿಸ್ಟ್ರಾನೊದ ಸಂತ ಜಾನ್, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು