Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 24 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಅಕ್ಟೋಬರ್ 2026

ಶನಿವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಅಂತೋನಿ ಮೇರಿ ಕ್ಲಾರೆಟ್, ಧರ್ಮಾಧ್ಯಕ್ಷ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಎಫೆ 4:7–16

7ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” 9“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. 14ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, 15ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

ಪ್ರತಿವಚನ ಕೀರ್ತನೆ

ಕೀರ್ತ 122:1–5

1ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 3ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. 4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.

ಸುವಾರ್ತೆ

ಲೂಕ 13:1–9

1ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. 2ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? 3ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ. 4ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ? 5ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು. 6ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ. 7ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು. 8ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ. 9ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು