ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 24 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಅಕ್ಟೋಬರ್ 2026
ಶನಿವಾರ · ಪಂಚಾಶತ್ತಮದ ನಂತರದ 21ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Apostle Philip, of the 70, one of the 7 Deacons (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
12ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ. 13ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ. 14ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ. 15ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. 16ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು. 17ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ. 18ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
ಸುವಾರ್ತೆ
27ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, 28ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು. 29ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. 30ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು. 31ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; 32ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 24 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು