ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 27 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 14 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಅಕ್ಟೋಬರ್ 2026
ಮಂಗಳವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Martyrs Nazarius, Gervasius, Protasius and Celsius of Milan (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, 21“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ. 23ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ. 3:1ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. 3ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
ಸುವಾರ್ತೆ
1ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ, 2ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, 3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 27 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು