Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 28 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಅಕ್ಟೋಬರ್ 2026

ಬುಧವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Venerable Euthymios the New, of Thessalonica and Monk of Mt Athos († 889)

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಕೊಲೊ 3:17–4:1

17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ. 18ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ. 20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ. 22ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ. 23ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ. 24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ. 25ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ. 4:1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

ಸುವಾರ್ತೆ

ಲೂಕ 8:22–25

22ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು. 23ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. 24ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. 25ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 28 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು