ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 29 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 29 ಅಕ್ಟೋಬರ್ 2026
ಗುರುವಾರ · ಸಾಮಾನ್ಯ ಕಾಲದ 30ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 30ನೇ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
10ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, 15ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. 18ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. 19ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. 20ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ. 2ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ. 9ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. 10ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
ಸುವಾರ್ತೆ
31ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು, 32ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ. 33ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ. 34ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು! 35ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು