ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 30 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಅಕ್ಟೋಬರ್ 2026
ಶುಕ್ರವಾರ · ಪಂಚಾಶತ್ತಮದ ನಂತರದ 22ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Holy Prophet Hosea († 820 BC)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
10ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ. 11ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು. 12ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ. 13ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. 14ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. 15ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ. 16ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. 17ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ. 18ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.
ಸುವಾರ್ತೆ
12ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ, 13ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು. 14ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು, 15ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು. 16ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. 17ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. 18ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 30 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು