Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 31 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 31 ಅಕ್ಟೋಬರ್ 2026

ಶನಿವಾರ · ಸಾಮಾನ್ಯ ಕಾಲದ 30ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 30ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಫಿಲಿಪ್ಪಿ 1:18–26

18ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು. 20ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು. 21ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. 22ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. 23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ. 24ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ. 25ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. 26ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.

ಪ್ರತಿವಚನ ಕೀರ್ತನೆ

ಕೀರ್ತ 42:1–2, 4

1ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. 2ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? 4ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಸುವಾರ್ತೆ

ಲೂಕ 14:1, 7–11

1ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. 7ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. 8ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು 9ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ. 10ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. 11ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು