ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 2 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ನವೆಂಬರ್ 2026
ಸೋಮವಾರ · ಸಾಮಾನ್ಯ ಕಾಲದ 31ನೇ ವಾರ
ಹಬ್ಬಗಳು ಮತ್ತು ಸಂತರು
ಮರಣಹೊಂದಿದ ಎಲ್ಲಾ ವಿಶ್ವಾಸಿಗಳ ಸ್ಮರಣೆ
ಸ್ಮರಣೋಲ್ಲೇಖ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
17ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ. 18“ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು. 19ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ. 20ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ. 21ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ! 22ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು. 23ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು! 24“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ. 25ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. 26ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
ಪ್ರತಿವಚನ ಕೀರ್ತನೆ
8ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. 10ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. 13ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. 14ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. 15ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. 16ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. 17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಎರಡನೆಯ ವಾಚನ
51ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. 52ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. 53ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. 54ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. 55“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” 56ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. 57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ಸುವಾರ್ತೆ
ಅಥವಾ: ಯೋಹಾ 12:23–26
25ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. 26ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು. 27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು