ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 2 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ನವೆಂಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Great Martyr Artemius of Antioch († 362)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. 2ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. 4ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು. 5ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
ಪತ್ರಿಕೆ (ಸಂತ ಆರ್ತೆಮಿಯಸ್)
1ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು. 2ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. 3ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು. 4ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. 5ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ. 6ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. 7ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. 8ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ. 9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. 10ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
ಸುವಾರ್ತೆ
18ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು, 19ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು. 20ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು. 21ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು. 22ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 2 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು