ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 3 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ನವೆಂಬರ್ 2026
ಮಂಗಳವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Venerable Hilarion the Great († 371-372)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ. 7ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ. 8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. 9ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ 10ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
ಪತ್ರಿಕೆ (ಬುಧವಾರಕ್ಕೆ)
1ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ, 2ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ. 3ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ. 4ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. 5ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ. 6ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. 7ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. 8ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
ಪತ್ರಿಕೆ (ಮಹಾನ್ ಸಂತ ಹಿಲಾರಿಯನ್)
6ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. 7ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. 8ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. 9“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” 10ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. 11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
ಸುವಾರ್ತೆ
23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? 26ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. 27ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
ಸುವಾರ್ತೆ (ಬುಧವಾರಕ್ಕೆ)
44“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು. 45ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು. 46ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು. 47ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ, 48ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು. 49ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು, 50ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 3 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು