Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 5 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 23 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ನವೆಂಬರ್ 2026

ಗುರುವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Holy Apostle James, the Brother of the Lord († ca.63)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಥೆಸ 2:9–14

9ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ. 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ. 11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, 12ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ. 13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ. 14ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಪತ್ರಿಕೆ (ಸಂತ ಯಾಕೋಬ)

ಗಲಾ 1:11–19

11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. 12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು. 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 14ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. 15ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, 16ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ, 17ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. 18ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು. 19ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಸುವಾರ್ತೆ

ಲೂಕ 9:49–56

49ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು, 50ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು. 51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು. 52ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. 53ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. 54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, 55ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು. 56ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.

ಸುವಾರ್ತೆ (ಸಂತ ಯಾಕೋಬ)

ಮತ್ತಾ 13:54–58

54ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು? 55ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ? 56ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು. 57ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು. 58ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 5 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು