ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 6 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ನವೆಂಬರ್ 2026
ಶುಕ್ರವಾರ · ಸಾಮಾನ್ಯ ಕಾಲದ 31ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 31ನೇ ವಾರದ ಶುಕ್ರವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
17ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ. 18ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. 19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು. 20ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. 21ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು. 4:1ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
ಸುವಾರ್ತೆ
1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, 2ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು. 3ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. 4ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು, 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು, 6ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು. 8ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು