ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 6 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ನವೆಂಬರ್ 2026
ಶುಕ್ರವಾರ · ಪಂಚಾಶತ್ತಮದ ನಂತರದ 23ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Martyr Arethas and with him 4299 Martyrs († 523)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
14ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. 15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. 16ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ. 17ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು. 18ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು. 19ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.
ಸುವಾರ್ತೆ
1ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ. 3ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. 4ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. 5ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ. 6ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. 7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ. 8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. 9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ. 10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು, 11‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ. 12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ. 13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು. 14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. 15ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 6 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು