ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 8 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ನವೆಂಬರ್ 2026
ಭಾನುವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. 2ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. 3ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. 4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು. 5ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. 6ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. 7ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.
ಎರಡನೆಯ ವಾಚನ
13ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. 15ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. 16ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು. 18ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.
ಸುವಾರ್ತೆ
1“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. 2ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. 3ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. 4ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. 5ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. 6ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. 7ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. 8ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. 9ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. 10ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. 11ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. 12ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. 13ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು