ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 9 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ನವೆಂಬರ್ 2026
ಸೋಮವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Martyr Nestor of Thessalonica († c. 306)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ. 3:1ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ, 2ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. 3ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. 4ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು. 5ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು. 6ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. 7ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು. 8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.
ಸುವಾರ್ತೆ
22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. 23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. 24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 9 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು