ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 10 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ನವೆಂಬರ್ 2026
ಮಂಗಳವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ವಾರದ ಮಂಗಳವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಮಹಾನ್ ಸಂತ ಲಿಯೋ, ಪೋಪ್ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. 2ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. 3ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. 4ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ 5ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು. 6ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು. 7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು; 8ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು. 11ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; 12ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, 13ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. 14ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಪ್ರತಿವಚನ ಕೀರ್ತನೆ
3ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. 4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. 18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. 23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. 27ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. 29ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
ಸುವಾರ್ತೆ
7“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ? 8ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ. 9ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. 10ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
ಇಂದಿನ ಸಂತರು
- ಮಹಾನ್ ಸಂತ ಲಿಯೋ, ಪೋಪ್ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು