ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 10 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ನವೆಂಬರ್ 2026
ಮಂಗಳವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Great Martyr Paraskeva (Piatnitsa) of Iconium (3rd C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? 10ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ. 11ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. 12ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ. 13ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
ಸುವಾರ್ತೆ
1ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. 2ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. 3ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು. 5ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. 6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, 7ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ 8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ. 9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 10 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು