ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 11 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ನವೆಂಬರ್ 2026
ಬುಧವಾರ · ಸಾಮಾನ್ಯ ಕಾಲದ 32ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 32ನೇ ವಾರದ ಬುಧವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಟೂರ್ಸ್ನ ಸಂತ ಮಾರ್ಟಿನ್, ಧರ್ಮಾಧ್ಯಕ್ಷ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ, 2ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು. 3ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು. 4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ, 5ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು. 6ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ಸುವಾರ್ತೆ
11ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು. 12ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, 13“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು. 14ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. 15ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, 16ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. 17ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? 18ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ, 19ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
ಇಂದಿನ ಸಂತರು
- ಟೂರ್ಸ್ನ ಸಂತ ಮಾರ್ಟಿನ್, ಧರ್ಮಾಧ್ಯಕ್ಷ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು