ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 11 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 29 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ನವೆಂಬರ್ 2026
ಬುಧವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Martyr Anastasia the Roman (3rd C)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ. 2ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ. 3ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. 4ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. 6ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ. 7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು. 8ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ. 9ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. 10ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ. 11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ. 12ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.
ಸುವಾರ್ತೆ
9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. 11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? 12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? 13ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 11 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು