Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 12 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ನವೆಂಬರ್ 2026

ಗುರುವಾರ · ಸಾಮಾನ್ಯ ಕಾಲದ 32ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 32ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಕೆಂಪು

ಸಂತ ಯೊಸಾಫತ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಫಿಲೆ 1:7–20

7ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು. 8ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ. 9ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ 10ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. 11ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. 12ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ. 13ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು. 14ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ. 15ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; 16ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ? 17ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. 18ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು. 19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ? 20ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.

ಪ್ರತಿವಚನ ಕೀರ್ತನೆ

ಕೀರ್ತ 146:7–10

7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. 8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. 9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. 10ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!

ಸುವಾರ್ತೆ

ಲೂಕ 17:20–25

20ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು. 22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. 23ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. 24ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. 25ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು