ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 12 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ನವೆಂಬರ್ 2026
ಗುರುವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Hieromartyr Zenobios, Bishop of Aegea, and his sister Zenobia in Cilicia († 285)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. 2ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. 3“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. 4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. 5ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. 7ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. 8ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
ಸುವಾರ್ತೆ
14ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. 15ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು. 16ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು. 17ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು. 18ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, 19ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. 20ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. 21“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; 22ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. 23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 12 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು