ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 13 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 31 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ನವೆಂಬರ್ 2026
ಶುಕ್ರವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Apostles of the 70: Stachias, Amplias, Urban, Narcissos, Apellias and Aristoboulos (1st C)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
9ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು. 10ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು. 11ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ. 12ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ, 13ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ. 24ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು. 25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ. 26ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ. 27ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ. 28ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
ಸುವಾರ್ತೆ
23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. 24“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು, 25ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ, 26ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 31 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 13 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು