Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 14 ನವೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ನವೆಂಬರ್ 2026

ಶನಿವಾರ · ಸಾಮಾನ್ಯ ಕಾಲದ 32ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 32ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

3 ಯೋಹಾ 1:5–8

5ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ. 6ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. 7ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. 8ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.

ಪ್ರತಿವಚನ ಕೀರ್ತನೆ

ಕೀರ್ತ 112:1–6

1ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 3ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 4ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.

ಸುವಾರ್ತೆ

ಲೂಕ 18:1–8

1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. 3ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು. 4ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ, 5ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.” 6ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ. 7ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? 8ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು