ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 16 ನವೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ನವೆಂಬರ್ 2026
ಸೋಮವಾರ · ಸಾಮಾನ್ಯ ಕಾಲದ 33ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 33ನೇ ವಾರದ ಸೋಮವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಮಹಾನ್ ಸಂತ ಗೆರ್ಟ್ರೂಡ್, ಕನ್ಯೆ · ಐಚ್ಛಿಕ ಸ್ಮರಣೆ
ಸ್ಕಾಟ್ಲೆಂಡ್ನ ಸಂತ ಮಾರ್ಗರೆಟ್ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು. 2ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು. 3ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. 4ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ 2:1“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, 2“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. 3ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. 4ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. 5ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
ಪ್ರತಿವಚನ ಕೀರ್ತನೆ
1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಸುವಾರ್ತೆ
35ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, 36ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. 37ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ, 38ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು. 39ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು. 40ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ, 41ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು. 42ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು. 43ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
ಇಂದಿನ ಸಂತರು
- ಮಹಾನ್ ಸಂತ ಗೆರ್ಟ್ರೂಡ್, ಕನ್ಯೆ
- ಸ್ಕಾಟ್ಲೆಂಡ್ನ ಸಂತ ಮಾರ್ಗರೆಟ್
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು