Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 16 ನವೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 3 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ನವೆಂಬರ್ 2026

ಸೋಮವಾರ · ಪಂಚಾಶತ್ತಮದ ನಂತರದ 25ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Martyrs Akepsimos the Bishop, Joseph the Presbyter and Haiphal the Deacon of Persia (4th C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಥೆಸ 1:1–10

1ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ, 2ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. 3ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ. 4ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. 5ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. 6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. 7ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. 8ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. 9ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. 10ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.

ಸುವಾರ್ತೆ

ಲೂಕ 11:29–33

29ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. 30ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. 31ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 33“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 16 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು