ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 17 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ನವೆಂಬರ್ 2026
ಮಂಗಳವಾರ · ಪಂಚಾಶತ್ತಮದ ನಂತರದ 25ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Venerable Joannicius the Great († 846)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
10ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು. 11ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ. 12ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ. 2:1ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, 2ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
ಸುವಾರ್ತೆ
34ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು. 35ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು. 36ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. 37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. 38ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. 41ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 17 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು