ಮುಖಪುಟ › ದೈನಂದಿನ ಬೈಬಲ್ ವಾಚನಗಳು › ನವೆಂಬರ್ 2026 › 18 ನವೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 5 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ನವೆಂಬರ್ 2026
ಬುಧವಾರ · ಪಂಚಾಶತ್ತಮದ ನಂತರದ 25ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Martyrs Galaction and his wife Epistimia, at Emesa (3rd C)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, 2ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ. 3ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. 4ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ. 5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ? 6ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. 7ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು. 8ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು. 9ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ, 10ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. 11ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. 12ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
ಸುವಾರ್ತೆ
42“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು. 43“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. 44ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. 45ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು, 46ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 18 ನವೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು